ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತೀಯ ಸೇನಾ ಹೆಲಿಕಾಪ್ಟರ್ ದುರಂತ; ಮೃತರ ಸಂಖ್ಯೆ 11ಕ್ಕೆ ಏರಿಕೆ

ಚೆನ್ನೈ: ಭಾರತೀಯ ವಾಯು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 14 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ಹೆಲಿಕಾಪ್ಟರ್ ಇಂದು ತೆರಳುತ್ತಿತ್ತು. ಆದರೆ ಮಧ್ಯಾಹ್ನ ತಮಿಳುನಾಡಿನ ಕೂಣೂರಿನಲ್ಲಿ ಪತನಗೊಂಡಿದೆ.

14 ಮಂದಿಯಲ್ಲಿ 11 ಗಣ್ಯರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಯಾರೆಲ್ಲಾ ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸೇನಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅವರ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸದ್ಯ ಅವರನ್ನ ವಿಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Edited By : Vijay Kumar
PublicNext

PublicNext

08/12/2021 04:04 pm

Cinque Terre

79.84 K

Cinque Terre

2

ಸಂಬಂಧಿತ ಸುದ್ದಿ