ಶ್ರೀನಗರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಜೇವಾನ್ ಪಾಂಥಾ ಚೌಕ್ ಬಳಿ ಪೊಲೀಸ್ ಸಿಬ್ಬಂದಿಯ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಸೋಮವಾರ ಸಂಜೆ ನಡೆದ ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು 12 ಮಂದಿಗೆ ಗಾಯಗಳಾಗಿವೆ.
ಪೊಲೀಸ್ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು ಏಕಾಏಕಿ ನಡೆದ ದಾಳಿಯಿಂದ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಗಾಯಗೊಂಡ ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನಾ ಪ್ರದೇಶವನ್ನು ಸಂಪೂರ್ಣ ಪೊಲೀಸ್, ಭದ್ರತಾ ಸಿಬ್ಬಂದಿಗಳು ಸುತ್ತುವರೆದಿದ್ದಾರೆ. ಉಗ್ರರನ್ನು ಹಿಡಿಯಲು ಶೋಧಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
PublicNext
14/12/2021 09:25 am