ಮುಂಬೈ: ನಗರದಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ 27 ವರ್ಷದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಬಂಧಿತ ಆರೋಪಿಯು 15 ವರ್ಷದ ಹುಡುಗಿಯನ್ನು ಮದುವೆಯಾಗಿ, ಹಲವಾರು ಬಾರಿ ಅತ್ಯಾಚಾರ ಮಾಡಿದ್ದಾನೆ.
ಸದ್ಯ ಬಾಲಕಿ ತಾಯಿಯಾಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ, ಆರೋಪಿ ಯುವಕನ ಪೋಷಕರು ಮತ್ತು ವಿವಾಹವನ್ನು ನೆರವೇರಿಸಿದ ಧರ್ಮಗುರುಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶುಕ್ರವಾರ ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿದ್ದಳು. ಇದರಿಂದ ಅನುಮಾನಗೊಂಡ ವೈದ್ಯರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಬಳಿಕ ಇದು ಬಾಲ್ಯ ವಿವಾಹದ ಕೇಸ್ ಎನ್ನುವುದು ಬಯಲಾಗಿದೆ.
PublicNext
22/12/2021 08:14 pm