ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಬುದ್ಧಿಮಾಂದ್ಯೆ ಮೇಲೆ ರೇಪ್‌​- ಎಎಸ್​​ಐಗೆ 20 ವರ್ಷ ಜೈಲು, 1 ಲಕ್ಷ ರೂ. ದಂಡ

ತುಮಕೂರು: ನಗರದಲ್ಲಿ 32 ವರ್ಷದ ಬುದ್ಧಿಮಾಂದ್ಯೆ ಮಹಿಳೆ ಮೇಲೆ ಮೂರು ವರ್ಷಗಳ ಹಿಂದೆ ಅತ್ಯಾಚಾರ ಎಸಗಿದ್ದ ಎಎಸ್​ಐ ಉಮೇಶಯ್ಯ ಎಂಬಾತನಿಗೆ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಗ್ರಾಮಾಂತರ ಠಾಣೆಯ ಎಎಸ್​​ಐ ಉಮೇಶಯ್ಯ 2017ರ ಜ.15ರಂದು ರಾತ್ರಿ ಗಸ್ತಿನಲ್ಲಿದ್ದಾಗ ತುಮಕೂರು ನಗರದ ಅಂತರಸನಹಳ್ಳಿ ಸೇತುವೆ ಬಳಿ ಹೋಗುತ್ತಿದ್ದ ಬುದ್ಧಿಮಾಂದ್ಯೆಯನ್ನು ಖಾಸಗಿ ಜೀಪ್‌ನಲ್ಲಿ ಕೂರಿಸಿಕೊಂಡು ಅತ್ಯಾಚಾರ ಎಸಗಿದ್ದ. ಈ ಸಂಬಂಧ ಸಂತ್ರಸ್ತೆಯ ಪೋಷಕರು ಎಎಸ್ಐ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ತುಮಕೂರಿನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಚ್.ಎಸ್. ಮಲ್ಲಿಕಾರ್ಜುನ ಸ್ವಾಮಿ ಅವರು ಪ್ರಕರಣದ ವಿಚಾರಣೆ ನಡೆಸಿದರು. ಉಮೇಶಯ್ಯನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ ಪರಿಹಾರವಾಗಿ ಒಂದು ಲಕ್ಷ ರೂ. ನೀಡುವಂತೆ ಸೂಚಿಸಿದ್ದಾರೆ.

Edited By : Vijay Kumar
PublicNext

PublicNext

31/01/2022 10:50 pm

Cinque Terre

93.89 K

Cinque Terre

9

ಸಂಬಂಧಿತ ಸುದ್ದಿ