ಬೆಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಒಬ್ಬ ಆರೋಪಿಯನ್ನ ಬೆಳಗ್ಗೆಯೇ ಅರೆಸ್ಟ್ ಮಾಡಿದ್ದ ಪೊಲೀಸರು, ಕ್ಲಾರ್ಕ್ ಪೇಟೆ ನಿವಾಸಿ ಖಾಸಿಫ್, ಮತ್ತು ಆತನ ಇಬ್ಬರು ಸ್ನೇಹಿತರನ್ನು ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಐದು ಮಂದಿಯಿಂದ ಈ ಕೃತ್ಯ ಎಸಗಿರೋದು ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿ ಬಿಡ್ತಿದ್ದಾರೆ.
PublicNext
21/02/2022 04:22 pm