ಅಮ್ರೋಹಾ: ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಹೋಳಿ ಆಚರಿಸುತ್ತಿದ್ದವರ ಮೇಲೆ ಅನ್ಯ ಕೋಮಿನ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಅಮ್ರೋಹಾದಲ್ಲಿ ಕೆಲ ದಿನಗಳ ಹಿಂದಷ್ಟೇ ಈ ಘಟನೆ ನಡೆದಿದ್ದು ಕಲ್ಲು ತೂರಾಡಿದ ವಿಡಿಯೋ ವೈರಲ್ ಆಗಿದೆ. ಹೋಳಿ ಆಚರಣೆ ವೇಳೆ ಯೋಗಿ ಆದಿತ್ಯನಾಥ್ ಅವರ ಕುರಿತಾದ ಹಾಡೊಂದಕ್ಕೆ ಯುವಕರು ಡಿಜೆ ಹಚ್ಚಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಇದನ್ನು ಸಹಿಸದ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಈ ಕಾರಣದಿಂದ ಸ್ಥಳದಲ್ಲಿ ಕೆಲಹೊತ್ತು ವಾತಾವರಣ ಬಿಗುವಿನಿಂದ ಕೂಡಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಹಾಗೂ ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.
PublicNext
19/03/2022 08:31 am