ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೌರಾ ಪ್ರದೇಶದಲ್ಲಿ ಮಂಗಳವಾರ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಪೊಲೀಸ್ ಕಾನ್‌ಸ್ಟೇಬಲ್ ಹುತಾತ್ಮರಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ 2.30 ರ ಸುಮಾರಿಗೆ ನಡೆದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಸೌರಾ ಪ್ರದೇಶದ ಬಲೂಚಿಪೋರಾದಲ್ಲಿ ಕುಪ್ವಾರದ ಕಾನ್‌ಸ್ಟೆಬಲ್ ಅಮೀರ್ ಹುಸೇನ್ ಲೋನ್ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹುಸೇನ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಭದ್ರತಾ ಸಿಬ್ಬಂದಿ ಈ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
PublicNext
23/03/2022 08:35 am