ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 15 ದಿನಗಳಲ್ಲೇ, ಕನಿಷ್ಠ 50 ಕ್ರಿಮಿನಲ್‌ಗಳು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ.
ಹೌದು. ಪೊಲೀಸ್ ಎನ್‌ಕೌಂಟರ್‌ಗಳು ಹಾಗೂ ಮನೆಯನ್ನು ಬುಲ್ಡೋಜರ್‌ಗಳ ಮೂಲಕ ಕೆಡವುವ ಆತಂಕದಲ್ಲಿ ಈ ಅಪರಾಧಿಗಳು ಶರಣಾಗಿದ್ದಾರೆ ಎನ್ನಲಾಗಿದೆ. ಇದೀಗ ಈ ಪಾತಕಿಗಳು 'ನಾನು ಶರಣಾಗುತ್ತಿದ್ದೇನೆ, ದಯವಿಟ್ಟು ಗುಂಡು ಹಾರಿಸಬೇಡಿ' ಎಂಬ ಭಿತ್ತಿಪತ್ರಗಳನ್ನು ಕೊರಳಿಗೆ ಸುತ್ತಿಕೊಂಡು ಪೊಲೀಸ್ ಠಾಣೆಗೆ ತೆರಳಿ ಶರಣಾಗುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಪ್ರಶಾಂತ್ ಕುಮಾರ್, "50 ಕ್ರಿಮಿನಲ್‌ಗಳು ಪೊಲೀಸ್ ಠಾಣೆಗಳಲ್ಲಿ ಶರಣಾಗಿದ್ದಾರೆ. ಅಷ್ಟೇ ಅಲ್ಲದೆ ಇನ್ನು ಮುಂದೆ ಅಪರಾಧ ಕೃತ್ಯಗಳನ್ನೂ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ" ಎಂದು ತಿಳಿಸಿದ್ದಾರೆ.
PublicNext
28/03/2022 10:51 am