ಬರೋಬ್ಬರಿ ಒಂಬತ್ತು ವರ್ಷಗಳ ಹಿಂದೆ ನಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಿಜೆಪಿ ನಾಯಕ ಹಾಗೂ ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 30 ಕ್ಕೆ ಬೆಳಗಾವಿಯ ಕೋಕಾ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ಇನ್ನು ಈ ಕೇಸ್ ನಲ್ಲಿ ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾಜಾ ಯಾನೆ ರಾಜೇಂದ್ರ ಕುಮಾರ್ (54) ಭಾಗಿಯಾದ ಆರೋಪವಿದೆ.
ಆರೋಪಿ ಬನ್ನಂಜೆ ರಾಜಾ ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ.
ಉಡುಪಿ, ಮಂಗಳೂರು, ಉತ್ತರ ಕನ್ನಡ, ಬೆಂಗಳೂರು, ಮೈಸೂರು, ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾತ್ರವಲ್ಲದೆ ಕೇರಳದಲ್ಲಿ ಹಪ್ತಾ, ವಸೂಲಿ, ಸುಲಿಗೆ, ಕೊಲೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಒಟ್ಟು 48 ಪ್ರಕರಣಗಳಿವೆ. ಉ.ಕ. ಜಿಲ್ಲೆಯ ಬಿಜೆಪಿ ನಾಯಕ ಹಾಗೂ ಉದ್ಯಮಿ ಆರ್.ಎನ್. ನಾಯಕ್ ಅವರನ್ನು 2013ರಲ್ಲಿ ಸುಪಾರಿ ನೀಡಿ ಕೊಲೆ ಮಾಡಿಸಿದ ಪ್ರಕರಣ ಈ ಪೈಕಿ ಅತ್ಯಂತ ಪ್ರಮುಖವಾಗಿದೆ.
PublicNext
29/03/2022 12:47 pm