ಬೆಳಗಾವಿ : ಬರೋಬ್ಬರಿ 9 ವರ್ಷಗಳ ಹಿಂದೆ ನಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಿಜೆಪಿ ನಾಯಕ ಹಾಗೂ ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಕೋಕಾ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಲಿದೆ. ಹೌದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಜನ ಆರೋಪಿಗಳನ್ನು 'ದೋಷಿ' ಎಂದು ಆದೇಶ ನೀಡಿದ ನ್ಯಾಯಾಧೀಶ ಸಿ.ಎಂ. ಜೋಶಿ ಏಪ್ರಿಲ್ 4ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಒಟ್ಟು ಪ್ರಕರಣದಲ್ಲಿ ಮೂವರು ಆರೋಪಿಗಳನ್ನು 'ನಿರ್ದೋಷಿ' ಎಂದು ನ್ಯಾಯಾಲಯ ಹೇಳಿದೆ.
ಉಳಿದಂತೆ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಬೆಂಗಳೂರಿನ ಅಭಿ ಭಂಡಗಾರ, ಉಡುಪಿಯ ಗಣೇಶ ಭಜಂತ್ರಿ, ಕೇರಳದ ಕೆ.ಎಂ.ಇಸ್ಮಾಯಿಲ್, ಹಾಸನದ ಮಹೇಶ ಅಚ್ಛಂಗಿ, ಕೇರಳದ ಸಂತೋಷ ಎಂ.ಬಿ, ಉಡುಪಿ ಮೂಲದ ಬನ್ನಂಜೆ ರಾಜಾ, ಬೆಂಗಳೂರಿನ ಜಗದೀಶ್ ಚಂದ್ರರಾಜ್, ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿಗಳೆಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ.
2013ರ ಡಿಸೆಂಬರ್ 21ರಂದು ಅಂಕೋಲಾದಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಕೋಕಾ ಕಾಯ್ದೆಯಡಿ ಕೇಸ್ ದಾಖಲಿಸಲಾಗಿತ್ತು. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ.ಪುರಾಣಿಕಮಠ ಹಾಗೂ ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಲ್ವಾ ವಕಾಲತ್ತು ವಹಿಸಿದ್ದರು.
PublicNext
30/03/2022 05:38 pm