ಬೆಂಗಳೂರು: ಇತ್ತೀಚಿಗೆ ಹೊರಡಿಸಲಾಗಿದ್ದ ಪೊಲೀಸ್ ಇಲಾಖೆಯ 545 ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮದ ವಾಸನೆ ಅಡರಿತ್ತು. ಈ ಕುರಿತಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.
ಈ ಕುರಿತಂತೆ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಪೊಲೀಸ್ ಇಲಾಖೆಗೆ 545 ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ನಡೆದಿತ್ತು. ತಾತ್ಕಾಲಿಕ ನೇರ ನೇಮಕಾತಿ ಪಟ್ಟಿ ಬಿಡುಗಡೆ ಆಗಿದೆ. ಸಾರ್ವಜನಿಕರಲ್ಲಿ ಬಹಳಷ್ಟು ಅನುಮಾನ ಇತ್ತು. ಇದರಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂಬ ಬಗ್ಗೆ ಇತ್ತೀಚೆಗೆ ಸಾರ್ವಜನಿಕರಿಂದ ದಾಖಲೆ, ಮಾಹಿತಿ ಸಿಕ್ಕಿದೆ. ಈ ಹಿನ್ನಲೆಯಲ್ಲಿ CID ತನಿಖೆಗೆ ಹಾಕಿದ್ದೇವೆ ಎಂದು ತಿಳಿಸಿದರು.
ಕಲಬುರಗಿಯ ಚೌಕ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. 9ನೇ ತಾರೀಖು ಎಫ್ಐಆರ್ ದಾಖಲಾಗಿದೆ. ಜ್ಞಾನ ಜ್ಯೋತಿ ಶಾಲೆಯಲ್ಲಿ ಇದು ನಡೆದಿದೆ ಎಂಬ ಮಾಹಿತಿ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. CID ತಂಡವನ್ನು ಅಲ್ಲಿಗೆ ಕಳಿಸಿದ್ದೇವೆ ಎಂದರು.
ನ್ಯಾಯಯುತವಾಗಿ ಪರೀಕ್ಷೆ ಬರೆದವರು ಇದ್ದಾರೆ. ಕಷ್ಟಪಟ್ಟು ಪರೀಕ್ಷೆ ಬರೆದವರು ಇದ್ದಾರೆ. ಕೆಲವರ ಓಎಂಆರ್ ಶೀಟ್‌ಗೂ ವರ್ಜಿನಲ್ ಶೀಟ್‌ಗೂ ಟ್ಯಾಲಿ ಆಗುತ್ತಿಲ್ಲ. ವಿರೇಶ್ ಎಂಬ ಅಭ್ಯರ್ಥಿಯನ್ನ ಈಗಾಗಲೇ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಸತ್ಯಾಸತ್ಯತೆ ಹೊರತರಲು ವಿಚಾರಣೆ ನಡೆಯುತ್ತಿದೆ. 21 ಮಾರ್ಕ್ಸ್ ಗೆ ಉತ್ತರಿಸಿಲ್ಲ. ಆದರೂ ಅವನಿಗೆ 100 ಮಾರ್ಕ್ಸ್ ಬಂದಿದೆ ಎನ್ನುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದರು.
PublicNext
10/04/2022 07:57 pm