ಧಾರವಾಡ: ಧಾರವಾಡದ ನುಗ್ಗಿಕೇರಿಯ ಆಂಜನೇಯ ದೇವಸ್ಥಾನ ಪ್ರಾಂಗಣದಲ್ಲಿ ಮುಸ್ಲಿಂ ವ್ಯಾಪಾರಿ ಅಂಗಡಿ ಮೇಲೆ ದಾಳಿ ನಡೆಸಿ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಧಾಂದಲೆ ಎಸಗಿದ್ದ ಶ್ರೀರಾಮ ಸೇನೆಯ ಓರ್ವ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧಾರವಾಡ ಹೊರವಲಯದ ನುಗ್ಗಿಕೇರಿ ದೇವಸ್ಥಾನ ಆವರಣದಲ್ಲಿ ಕಲ್ಲಂಗಡಿ ಹಣ್ಣಿನ ಅಂಗಡಿ ಧ್ವಂಸ ಮಾಡಿದ್ದ ಶ್ರೀರಾಮ ಸೇನೆಯ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ನುಗ್ಗಿಕೇರಿ ಹನುಮಂತ ದೇವರ ದೇವಸ್ಥಾನದಲ್ಲಿ ಗಲಾಟೆಯಲ್ಲಿ ಅಂಗಡಿ ನಷ್ಟ ಅನುಭವಿಸಿದ ವ್ಯಾಪಾರಸ್ಥ ನಬಿಸಾಬ್ ಕಿಲ್ಲೇದಾರ ಅವರು ದೂರು ನೀಡಿದ್ದರು.
PublicNext
10/04/2022 08:09 pm