ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಹಿಂಡಲಗಾ ಗ್ರಾಮದಲ್ಲಿ 108 ಕಾಮಗಾರಿಗೆ ಅನುಮೋದನೆ ನೀಡಿದ್ದ ಪ್ರತಿಗಳು ಮಾಧ್ಯಮಗಳಿಗೆ ಲಭ್ಯವಾಗಿವೆ.
ಹಿಂಡಲಗಾ ಗ್ರಾಮದಲ್ಲಿ 108 ಕಾಮಗಾರಿಗೆ ಅನುಮೋದನೆ ನೀಡುವಂತೆ ಹಿಂದಿನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ, ಪಂಚಾಯತ್ ರಾಜ್ ಇಲಾಖೆಗೆ ಪತ್ರ ಬರೆದಿದ್ದರು. 2021 ಫೆಬ್ರವರಿ 15ರಂದು ಬರೆದಿದ್ದ ಈ ಪತ್ರಕ್ಕೆ 2021 ಫೆಬ್ರವರಿ 26ರಂದು ಪ್ರಧಾನ ಕಾರ್ಯದರ್ಶಿಗಳು ಅನುಮೋದನೆಯನ್ನೂ ನೀಡಿದ್ದರು. ಅಲ್ಲದೆ ಕಾಮಗಾರಿ ಆದೇಶ ಪ್ರತಿ ನೀಡಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಸಿರೋದು ಕೂಡ ಇದೀಗ ಬೆಳಕಿಗೆ ಬಂದಿದೆ.
ಸದ್ಯ ಕಾಮಗಾರಿಗೆ ಅನುಮೋದನೆ ಸಿಕ್ಕಿಲ್ಲವೆಂದು ಸರ್ಕಾರ ವಾದಿಸುತ್ತಿದ್ದು, ಅನುಮೋದನೆ ಇಲ್ಲದೇ ಸಂತೋಷ್ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದೆ. ಈ ಬೆನ್ನಲ್ಲೇ 108 ಕಾಮಗಾರಿಗೆ ಅನುಮೋದನೆ ನೀಡಿದ್ದ ಪ್ರತಿ ಲಭ್ಯವಾಗಿದ್ದು, ಇದೀಗ ಸಂತೋಷ್ ಅತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
PublicNext
21/04/2022 01:03 pm