ಲಕ್ನೋ: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿ ಉತ್ತರ ಪ್ರದೇಶದ ಚರ್ಚ್ ಪಾದ್ರಿಯನ್ನು ಬಂಧಿಸಲಾಗಿದೆ.
ಚಾಂದಿನಗರ ಪ್ರದೇಶದ ಗ್ರಾಮವೊಂದರಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಆಕೆಯ ಮಗಳು ಸೈಕ್ಲಿಂಗ್‍ಗಾಗಿ ಚರ್ಚ್‍ಗೆ ಹೋಗಿದ್ದ ವೇಳೆ ಪಾದ್ರಿ ಆಲ್ಬರ್ಟ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನೀರಜ್ ಜಾದೂನ್ ತಿಳಿಸಿದ್ದಾರೆ.
ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಆದರೆ, ಬಾಲಕಿ ಮನೆಗೆ ಬಂದ ಬಳಿಕ ತನಗಾದ ಸಂಕಷ್ಟವನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
PublicNext
25/04/2022 09:38 pm