ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದ ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ನೇಮಕಾತಿ ಎಡಿಜಿಪಿ ಅಮೃತ್ ಪಾಲ್ ಅವರನ್ನು ಸರಕಾರ ಬುಧವಾರ ಎತ್ತಂಗಡಿ ಮಾಡಿದೆ.ಅಮೃತ್ ಪಾಲ್ ಅವರನ್ನು ಬೆಂಗಳೂರು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಆರ್.ಹಿತೇಂದ್ರ ಅವರನ್ನು ನೇಮಕಾತಿ ಎಡಿಜಿಪಿಯಾಗಿ ನೇಮಕ ಮಾಡಿರುವ ಸರಕಾರ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ತಲೆಮರೆಸಿಕೊಂಡಿರುವ ಮಾಸ್ಟರ್ ಮೈಂಡ್ ಆಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿ ಆರು ಜನರಿಗೆ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ. ತನಿಖೆಗೆ ಸಿಐಡಿಯ 6 ವಿಶೇಷ ತಂಡ ರಚನೆಮಾಡಲಾಗಿದೆ.
PublicNext
27/04/2022 03:49 pm