ರಾಯಚೂರು: ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರಾಯಚೂರು ಜಿಲ್ಲೆಯ ಲಿಂಗಸೂಗುರು ಡಿವೈಎಸ್ ಪಿ ಮಲ್ಲಿಕಾರ್ಜುನ್ ಸಾಲಿ ಅವರನ್ನು ಅಮಾನತ್ತುಗೊಳಿಸಲಾಗಿದೆ. ಪಿಎಸ್ಐ ಪರೀಕ್ಷೆಯ ಅಕ್ರಮದ ಬಗ್ಗೆ ಮಾಹಿತಿ ಪಡೆದು ಜ್ಞಾನ ಜ್ಯೋತಿ ಶಾಲೆಯ ಕಾರ್ಯದರ್ಶಿ ,ಹೆಡ್ ಮಾಸ್ಟರ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಸಾಲಿ ಹಣ ವಸೂಲಿಗೆ ಬೇಡಿಕೆ ಇಟ್ಟಿದ್ದರು.
ಪ್ರಕರಣವನ್ನು ಮುಚ್ಚಿಹಾಕಲು 10 ಲಕ್ಷ ರೂ. ಹಣವನ್ನು ವಸೂಲಿ ಮಾಡಿರುವ ಆರೋಪ ಹೊತ್ತ ಇವರನ್ನು ಇಂದು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
PublicNext
07/05/2022 02:47 pm