ಬೆಂಗಳೂರು: ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಿ ನಾಗೇಶ್‌ನನ್ನು ಬಂಧಿಸಿದ್ದು, ಏಪ್ರಿಲ್ 28 ರಂದು ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿದ್ದ, 16 ದಿನಗಳ ಸತತ ಪ್ರಯತ್ನಕ್ಕೆ ಒಂದು ಉತ್ತಮ ರಿಸಲ್ಟ್ ದೊರೆತಿದೆ. ಆರೋಪಿಯ ಮೇಲೆ ಎಂಟು ದಿನಗಳ ಒಳಗೆ ಚಾರ್ಜ್‌ಶೀಟ್ ಹಾಕಲಾಗುವುದು. ಅಲ್ಲದೆ ಆದಷ್ಟು ಬೇಗ ಯುವತಿಗೆ ನ್ಯಾಯ ದೊರಕಿಸುವ ಎಲ್ಲ ಕೆಲಸ ಮಾಡಲಾಗುವುದು ಎಂದು ಕಮಿಷನರ್ ಭರವಸೆ ನೀಡಿದ್ದಾರೆ.
ಇನ್ನೂ ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ಕಳೆದ 15ದಿನಗಳಿಂದ ಸುಮಾರು ನೂರಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಅಲ್ಲದೆ 50 ಮಂದಿ ಪೊಲೀಸ್ ಅಧಿಕಾರಿಗಳು ಎಲ್ಲೆಡೆ ಓಡಾಡುವ ಮೂಲಕ ಆರೋಪಿಯ ಪತ್ತೆಗಾಗಿ ಸತತವಾಗಿ ಕೆಲಸ ಮಾಡುತ್ತಿದ್ದರು. ಅವರ ಪರಿಶ್ರಮಕ್ಕೆ 5 ಲಕ್ಷ ರೂ.ಗಳನ್ನೂ ಅಭಿನಂದನೆಯ ರೂಪದಲ್ಲಿ ನೀಡಲಾಗುತ್ತದೆ ಎಂದು ಕಮಲ್ ಪಂತ್ ತಿಳಿಸಿದರು.
PublicNext
14/05/2022 04:47 pm