ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಸ್‌ಐ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ಜಾಮೀನು ಅರ್ಜಿ ವಜಾ

ಕಲಬುರ್ಗಿ: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಂಧನಕ್ಕೆ ಒಳಗಾಗಿರುವಂತ ದಿವ್ಯಾ ಹಾಗರಗಿ ಸೇರಿದಂತೆ ನಾಲ್ವರು ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು, ಕಲಬುರ್ಗಿ ಜಿಲ್ಲಾ ನ್ಯಾಯಾಲಯವು ವಜಾಗೊಳಿಸಿದೆ.

ಇಂದು ಕಲಬುರ್ಗಿ 3ನೇ ಜೆಎಂಎಫ್ ಸಿ ಕೋರ್ಟ್, ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿರುವ ಆರೋಪಿಗಳಾದ ದಿವ್ಯಾ ಹಾಗರಗಿ, ರುದ್ರಗೌಡ, ಕಾಶೀನಾಥ್ ಹಾಗೂ ಎನ್ವಿ. ಸುನೀಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ದಿವ್ಯಾ ಹಾಗರಗಿ ಸೇರಿದಂತೆ ನಾಲ್ವರನ್ನು ಸಿಐಡಿ ಬಂಧಿಸಿತ್ತು. ಇದೀಗ ನ್ಯಾಯಾಂಗ ಬಂಧನದಲ್ಲಿ ಆರೋಪಿಗಳಿದ್ದಾರೆ. ಇವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಇಂದು ಕೋರ್ಟ್ ವಜಾಗೊಳಿಸಿದೆ.

Edited By : Nagaraj Tulugeri
PublicNext

PublicNext

20/05/2022 06:36 pm

Cinque Terre

42.75 K

Cinque Terre

2

ಸಂಬಂಧಿತ ಸುದ್ದಿ