ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಪ್ರತ್ಯೇಕತಾವಾದಿ ಉಗ್ರ ಯಾಸೀನ್‌ ಮಲಿಕ್‌ಗೆ ಜೀವಾವಧಿ ಶಿಕ್ಷೆ

ನವದೆಹಲಿ: ಎರಡು ಪ್ರಮುಖ ಪ್ರಕರಣಗಳಲ್ಲಿ ಕಾಶ್ಮೀರದ ಪ್ರತ್ಯೇಕತಾವಾದಿ ಉಗ್ರ ಯಾಸೀನ್‌ ಮಲಿಕ್‌ಗೆ ಎನ್‌ಐಎ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.

ಭಯೋತ್ಪಾದನೆ ಚಟುವಟಿಕೆಗೆ ಹಣಕಾಸು ನೆರವು ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಯಾಸೀನ್ ಮಲಿಕ್‌‌ನನ್ನು ಯುಎಪಿಎ ಕಾಯ್ದೆ ಅಡಿ ಬಂಧಿಸಲಾಗಿತ್ತು. ಈತನ ಮೇಲೆ ಒಟ್ಟು ಎಂಟು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಎನ್‌ಐಎ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಪ್ರತ್ಯೇಕತಾವಾದಿ ಉಗ್ರ ಯಾಸೀನ್‌ ಮಲಿಕ್‌ಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ದಂಡ ವಿಧಿಸಲಾಗಿದೆ.

Edited By : Nagaraj Tulugeri
PublicNext

PublicNext

25/05/2022 06:53 pm

Cinque Terre

45.76 K

Cinque Terre

25

ಸಂಬಂಧಿತ ಸುದ್ದಿ