ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ವಲಸೆ ಕಾರ್ಮಿಕ ಮೃತಪಟ್ಟು ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.
ಉಗ್ರರ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕ ದಿಲ್ಕುಶ್ ಕುಮಾರ್ ಮತ್ತು ಗಾಯಗೊಂಡ ಕಾರ್ಮಿಕನನ್ನು ಗುರಿ ಎಂದು ಗುರುತಿಸಲಾಗಿದೆ. ದಿಲ್ಕುಶ್ ಕುಮಾರ್(17) ಬಿಹಾರದ ಅರ್ನಿಯಾ ಪ್ರದೇಶದ ನಿವಾಸಿ ಎನ್ನಲಾಗಿದೆ. ಮಧ್ಯ ಕಾಶ್ಮೀರ ಜಿಲ್ಲೆಯ ಚದೂರ ಪ್ರದೇಶದಲ್ಲಿನ ಮಗ್ರೆಪೋರಾದ ಇಟ್ಟಿಗೆ ಭಟ್ಟಿಯಲ್ಲಿ ಕೆಲಸಕ್ಕಿದ್ದ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆದಿದೆ.
ಗಾಯಗೊಂಡ ಗುರಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಕುಮಾರ್ ನನ್ನು ಇಲ್ಲಿನ ಎಸ್‌ಎಂಎಚ್‌ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
PublicNext
03/06/2022 08:13 am