ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಗಾಂಜಾ, ಡ್ರಗ್ಸ್ ಸೇವಿಸುವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಎಸ್ಪಿ ರಿಷ್ಯಂತ್ ಎಚ್ಚರಿಕೆ

ದಾವಣಗೆರೆ: ಕಳೆದೊಂದು ವರ್ಷದಲ್ಲಿ ವಶಪಡಿಸಿಕೊಂಡಿದ್ದ 11 ಪ್ರಕರಣಗಳಿಗೆ ಸೇರಿದ ಒಟ್ಟು 25 ಕೆಜಿ 800 ಗ್ರಾಂ ಅಕ್ರಮ ಗಾಂಜಾ, ಡ್ರಗ್ಸ್ ಅನ್ನು ನ್ಯಾಯಾಲಯದ ಅನುಮತಿ ಪಡೆದು ಸುಟ್ಟು ಹಾಕಲಾಯಿತು.

ನಗರದ ಹೊರ ವಲಯದಲ್ಲಿ ಎಸ್ಪಿ ಸಿ.ಬಿ. ರಿಷ್ಯಂತ್ ಅವರ ಉಪಸ್ಥಿತಿಯಲ್ಲಿ ಬೆಂಕಿಯಲ್ಲಿ ಹಾಕಿ ನಾಶಪಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ರಿಷ್ಯಂತ್, ಡ್ರಗ್ಸ್ ಸೇವನೆ, ಮಾರಾಟ ವಿರುದ್ಧ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ. ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಾಂಜಾ, ಡ್ರಗ್ಸ್ ಸೇವಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತೇವೆ. ಡ್ರಗ್ಸ್ ನಿರ್ಮೂಲನೆ ಮಾಡಲು ಎಲ್ಲರೂ ಕೈ ಜೋಡಿಸಬೇಕು. ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಬಿಡಬೇಕು. ಒಳ್ಳೆಯ ನಡವಳಿಕೆ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Edited By : Nagesh Gaonkar
PublicNext

PublicNext

28/06/2022 06:52 pm

Cinque Terre

81.85 K

Cinque Terre

2