ಉದಯಪುರ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿದ್ದಕ್ಕಾಗಿ ಉದಯಪುರದಲ್ಲಿ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಲಾಗಿದೆ.ಇದರ ಮಧ್ಯೆ ಶಿರಚ್ಛೇದ ವಿರೋಧಿಸಿ ಪ್ರತಿಭಟನೆ ಭುಗಿಲೆದ್ದ ಬೆನ್ನಲ್ಲೇ ಉದಯಪುರ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಕಾಲ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಲಾಗಿದೆ.
ಉದಯಪುರದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಇಬ್ಬರು ಕಿಡಿಗೇಡಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ್ದಾರೆ. ಕೃತ್ಯದ ಬಳಿಕ ದುಷ್ಕರ್ಮಿಗಳು ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ.
‘ಉದಯಪುರದಲ್ಲಿ ನಡೆದ ಭೀಕರ ಹತ್ಯೆಯನ್ನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಿದ್ದಾರೆ.
PublicNext
28/06/2022 07:57 pm