ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ವಂಡಕ್‌ಪೋರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಉಗ್ರನನ್ನು ಯೋಧರು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವಂತಿಪೋರಾದ ವಂಡಕ್‌ಪೋರಾ ಪ್ರದೇಶದಲ್ಲಿ ಭಯೋತ್ವಾದಕರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಸೇನಾಪಡೆಗಳು ಕಾರ್ಯಾಚರಣೆಗೆ ಮುಂದಾದಾಗ, ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ ಯೋಧರು ಒಟ್ಟು ಇಬ್ಬರು ಉಗ್ರರನ್ನು ಹೊಸಕಿ ಹಾಕಿದ್ದಾರೆ. ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
PublicNext
11/07/2022 03:19 pm