ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಸೆಲ್ಫಿ ವಿಡಿಯೋ ಮಾಡಿ ನದಿಗೆ ಹಾರಿದ ಯುವಕ.!

ಗದಗ: ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿ ತುಂಗಭದ್ರಾ ನದಿಗೆ ಹಾರಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದೆ.

ಮುಂಡರಗಿ ಪಟ್ಟಣದ ಗೊಂದಳಿ ಓಣಿಯ ವಿಶ್ವನಾಥ್ ಗಣಾಚಾರಿ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೊರ್ಲಹಳ್ಳಿಯ ಸೇತುವೆ ಮೇಲೆ ನಿಂತ ವಿಶ್ವನಾಥ್ ಆತ್ಮಹತ್ಯೆಗೂ ಮುಂಚೆ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಆದರೆ ಆತ್ಮಹತ್ಯೆಗೆ ಕಾರಣವನ್ನ ಸ್ಪಷ್ಟವಾಗಿ ತಿಳಿಸಿಲ್ಲ. ಸೆಲ್ಫಿ ವಿಡಿಯೋ ಮಾಡಿ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Edited By :
PublicNext

PublicNext

21/07/2022 12:24 pm

Cinque Terre

35.18 K

Cinque Terre

1

ಸಂಬಂಧಿತ ಸುದ್ದಿ