ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಎನ್ಐಎ ಅಧಿಕಾರಿಗಳು ದಾಳಿನಡೆಸಿದ್ದಾರೆ. ಉಗ್ರ ಚಟುವಟಿಕೆಯಲ್ಲಿ ತೊಡಗಿದ ಆರೋಪದಲ್ಲಿ ಶಂಕಿತ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆ 4.15ಕ್ಕೆ ದೆಹಲಿ, ಬೆಂಗಳೂರಿನ ಎನ್ಐಎ ತಂಡದ ಅಧಿಕಾರಗಳಿಂದ ಅಬ್ದುಲ್ ಮುಕ್ತದೀರ್ ಎಂಬಾತನ ನಿವಾಸದ ಮೇಲೆ ದಾಳಿಯನ್ನು ನಡೆಸಲಾಗಿದೆ.
ಇದೀಗ ಅಬ್ದುಲ್ ಮುಕ್ತದೀರ್ ಅನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿರೋದಾಗಿ ಮಾಹಿತಿ ತಿಳಿದು ಬಂದಿದೆ. ಈತ ಉಗ್ರ ಚಟುವಟಿಕೆಗೆ ನೇಮಕಗೊಳ್ಳೋದಕ್ಕಾಗಿ ಯುವಕರನ್ನು ಪ್ರೇರೇಪಣೆ ಮಾಡುತ್ತಿದ್ದ ಎಂಬುದಾಗಿ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸರ ಸಹಕಾರದಿಂದ ಅಬ್ದುಲ್ ಮುಕ್ತದೀರ್ ವಶಕ್ಕೆ ಎನ್ಐಎ ಪಡೆದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
PublicNext
31/07/2022 04:42 pm