ಬೆಳಗಾವಿ : ಎಂದಿನಂತೆ ಶಾಲೆಗೆ ಹೊರಟ ವಿದ್ಯಾರ್ಥಿಗಳಿಗೆ ಲಾರಿವೊಂದು ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತಿಬ್ಬರು ಗಾಯಗೊಂಡ ಘಟನೆ ಇಂದು ಬೆಳಗಾವಿ ಜಿಲ್ಲೆಯ ಖಾನಾಪುರ ರಸ್ತೆಯ ಮೀನು ಮಾರುಕಟ್ಟೆ ಬಳಿ ನಡೆದಿದೆ.
ಸದ್ಯ ಗಾಯಗೊಂಡ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಮತ್ತು ಯುವಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಭಾರಿ ವಾಹನಗಳ ಬೇಕಾಬಿಟ್ಟಿ ಓಡಾಟದಿಂದ ನಿರಂತರ ಅಪಘಾತಗಳು ಸಂಭವಿಸುತ್ತಿವೆ. ಎರಡು ದಿನಗಳ ಹಿಂದೆ ಹಳೇ ತರಕಾರಿ ಮಾರುಕಟ್ಟೆ ಬಳಿಯೂ ಕಾಲೇಜು ವಿದ್ಯಾರ್ಥಿನಿ ಮರಳು ತುಂಬಿದ ಲಾರಿ ಅಡಿ ಸಿಲುಕಿ ಮೃತಪಟ್ಟಟಿದ್ದಳು. ಈಗ ಖಾನಾಪುರ ರಸ್ತೆಯಲ್ಲಿ ಘಟನೆ ನಡೆದಿದೆ.
ಹೀಗೆ ಬಿಟ್ಟರೆ ನಗರದಲ್ಲಿ ಜನಸಾಮಾನ್ಯರ ಸಂಚಾರಕ್ಕೆ ಕಷ್ಟ. ಅದರಲ್ಲೂ ವಿದ್ಯಾರ್ಥಿಗಳು ಭಯದಲ್ಲಿಯೇ ಶಾಲಾಕಾಲೇಜಿಗೆ ತೆರಳುವ ಕಾಲ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸುವ ಪ್ರಯತ್ನ ಮಾಡುತ್ತಿದ್ದಾರೆ.
PublicNext
03/08/2022 11:56 am