ನವದೆಹಲಿ: ಪುಂಡರ ಗುಂಪೊಂದು ಠಾಣೆಗೆ ನುಗ್ಗಿ ಹೆಡ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ಮಾಡಿದೆ. ಈ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಆನಂದ ವಿಹಾರ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ನಡೆದಿದೆ.
ಠಾಣೆಗೆ ನುಗ್ಗಿದ ದುಷ್ಕರ್ಮಿಗಳು ಹೆಡ್ ಕಾನ್ಸ್‌ಟೇಬಲ್‌ರನ್ನು ಟೇಬಲ್ ಮೇಲೆ ಕೂರಿಸಿ ಹಲ್ಲೆ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಈ ಹಲ್ಲೆ ಪ್ರಕರಣ ನಡೆದಿದೆ ಎನ್ನಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಲೇ ಎಚ್ಚೆತ್ತುಕೊಂಡ ದೆಹಲಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು ಹಲ್ಲೆಕೋರರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
PublicNext
07/08/2022 07:31 pm