ನಾವದಾ: ರೈಲು ನಿಲ್ದಾಣದಲ್ಲಿ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನ ಮೇಲೆ ರೈಲ್ವೇ ಪೊಲೀಸರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.
ಬಿಹಾರ ರಾಜ್ಯದ ನಾವದಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಯುವಕ ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದಾನೆ ಎಂದು ಸಾರ್ವಜನಿಕರು ದೂರಿದ್ದಾರೆ. ಈತನನ್ನು ಹಿಡಿದು ವಿಚಾರಿಸುವ ವೇಳೆ ರೈಲ್ವೇ ಪೊಲೀಸರು ಸಣ್ಣ ಕಾರಣಕ್ಕೆ ಆತನ ಮೇಲೆ ಗುಂಪು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆ ಪರಿಣಾಮ ಯುವಕ ನಿತ್ರಾಣಗೊಂಡಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದು ಆತ ಕಳ್ಳನೇ ಆಗಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬಹುದು. ಅದು ಬಿಟ್ಟು ಈ ರೀತಿ ಅಮಾನವೀಯವಾಗಿ ವರ್ತಿಸುವುದು ಸರಿಯಲ್ಲ ಎಂದು ನೆಟ್ಟಿಗರು ಆಕ್ರೋಶಿತರಾಗಿದ್ದಾರೆ.
PublicNext
10/08/2022 02:33 pm