ರಾಯಭಾಗ : ರಾಯಬಾಗ ತಾಲೂಕಿನ ಕುಡಚಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಬರೊಬ್ಬರಿ 26 ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ.ಚಿಂಚಲಿ ರೈಲ್ವೇ ಸ್ಟೇಶನ್ ಬಳಿ ಕುಡಚಿ ಪೊಲೀಸರು ಬೈಕ್ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಮೇಲೆ ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಠಾಣೆಗೆ ಕರೆದುಕೊಂಡು ಬಂದು ವಿಚಾರಿಸಿದಾಗ ಬೈಕ್ಗಳನ್ನು ಕಳ್ಳತನ ಮಾಡಿರುವ ಬಗ್ಗೆ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಕುಡಚಿ, ಚಿಂಚಲಿ, ಉಗಾರ ಬಿಕೆ, ಮಂಗಸೂಳಿ ಗ್ರಾಮಗಳಲ್ಲಿ ಕಳ್ಳತನ ಮಾಡಿದ್ದ 14 ಲಕ್ಷ 5 ಸಾವಿರ ರೂಪಾಯಿ ಮೌಲ್ಯದ ಒಟ್ಟು 26 ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕುಡಚಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಡಾ.ಸಂಜೀವ್ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
10/08/2022 10:15 pm