ಚಂಡೀಗಡ: ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ದೆಹಲಿ ಪೊಲೀಸರು ಮತ್ತು ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆ ಮೂಲಕ ಪಾಕಿಸ್ತಾನದ ಗುಪ್ತಚರ ಸಂಘಟನೆ ಐಎಸ್ ಬೆಂಬಲಿತ ಉಗ್ರರ ಸಂಚನ್ನು ವಿಫಲಗೊಳಿಸಿ, ನಾಲ್ವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ವರದಿಗಳ ಪ್ರಕಾರ, ಕೆನಡಾ ಮೂಲದ ಅರ್ಶ್ ದಲ್ಲಾ ಮತ್ತು ಆಸ್ಟ್ರೇಲಿಯಾ ಮೂಲದ ಗುರ್ಜಂತ್ ಸಿಂಗ್‌ಗೆ ಸಂಬಂಧಿಸಿದ ನಾಲ್ವರು ಸದಸ್ಯರನ್ನು ಬಂಧಿಸಲಾಗಿದೆ. ಪಂಜಾಬ್ ಪೊಲೀಸರು ಮೂರು ಹ್ಯಾಂಡ್ ಗ್ರೆನೇಡ್‌ಗಳು, ಒಂದು ಸುಧಾರಿತ ಸ್ಫೋಟಕ ಸಾಧನ (ಐಇಡಿ), ಎರಡು 9 ಎಂಎಂ ಪಿಸ್ತೂಲ್‌ಗಳು ಮತ್ತು 40 ಲೈವ್ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ತಿಳಿಸಿದ್ದಾರೆ.
ಇದೇ ವೇಳೆ ಉತ್ತರ ಪ್ರದೇಶದ ಉಗ್ರ ನಿಗ್ರಹ ದಳದ ಅಧಿಕಾರಿಗಳು ಕಾನ್ಪುರದಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರನನ್ನು ಸೆರೆ ಹಿಡಿದಿದ್ದಾರೆ. ಈತನನ್ನು ಹಬಿಬುಲ್ ಇಸ್ಲಾಂ ಯಾನೆ ಸೈಫುಲ್ಲಾ ಎಂದು ಗುರುತಿಸಲಾಗಿದೆ. 19 ವರ್ಷದ ಸೈಫಲ್ಲಾ ಗಡಿಯಾಚೆಗಿನ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರಲು ಟೆಲಿಗ್ರಾಮ್, ಫೇಸ್‌ಬುಕ್ ಮೆಸೆಂಜರ್ ಮತ್ತು ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
PublicNext
15/08/2022 10:36 am