ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿಪ್ಪು ಫೋಟೋಗಾಗಿ ಸಾವರ್ಕರ್ ಫ್ಲೆಕ್ಸ್ ತೆಗೆದ ಕಿಡಿಗೇಡಿಗಳು

ಶಿವಮೊಗ್ಗ: ಶಿವಮೊಗ್ಗದಲ್ಲಿ ಟಿಪ್ಪು ಫೋಟೋಗಾಗಿ ಸಾವರ್ಕರ್ ಫ್ಲೆಕ್ಸ್ ತೆಗೆದ ಕಾರಣ ಎರಡು ಗುಂಪಿನ ಮಧ್ಯೆ ಜಟಾಪಟಿ ನಡೆದಿದೆ.

ಹೌದು ಜಿಲ್ಲೆಯ ಅಮೀರ್ ಅಹಮದ್ ವೃತ್ತದಲ್ಲಿ ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಫೋಟೋ ಇಡಲು ಕೆಲ ಯುವಕರು ಮುಂದಾಗಿದ್ದರು. ಇದೇ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ.

ಇನ್ನು ಈ ವಿಚಾರ ತಿಳಿದ ಪೊಲೀಸರು ಸಾವರ್ಕರ್ ಫೋಟೋ ತೆರವು ಮಾಡಿದ್ದರು. ಜೊತೆಗೆ ಟಿಪ್ಪು ಫೋಟೊ ಇಡಲು ನಿರಾಕರಿಸಿದ್ದರು.

ಇದೇ ವಿಚಾರಕ್ಕೆ ಜಟಾಪಟಿ ಆರಂಭವಾಗಿದ್ದು, ಸಾವರ್ಕರ್ ಫೋಟೋ ತೆರವು ಮಾಡಿರುವುದಕ್ಕೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮತ್ತೊಂದು ಕೋಮಿನ ಯುವಕರು ಪ್ರತಿಭಟನೆ ನಡೆಯುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ್ದು, ಪೊಲೀಸರನ್ನೂ ಲೆಕ್ಕಿಸದೇ ಸಾವರ್ಕರ್ ಫ್ಲೆಕ್ಸ್ ಕಿತ್ತೊಗೆಯಲು ಮುಂದಾಗಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಸದ್ಯ ಅಹಮದ್ ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Edited By : Nagesh Gaonkar
PublicNext

PublicNext

15/08/2022 05:13 pm

Cinque Terre

99.55 K

Cinque Terre

28

ಸಂಬಂಧಿತ ಸುದ್ದಿ