ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಸಾವರ್ಕರ್ ಭಾವಚಿತ್ರ ಹರಿದ ಕೃತ್ಯ; ಕೇಸ್‌ ದಾಖಲು

ತುಮಕೂರು: ಆಗಸ್ಟ್ 15ರ ರಾತ್ರಿ ತುಮಕೂರು ನಗರದಲ್ಲಿ ಸಾವರ್ಕರ್ ಭಾವಚಿತ್ರವನ್ನು ಹರಿದು ಹಾಕಿದ ಘಟನೆಗೆ ಸಂಬಂಧಪಟ್ಟಂತೆ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ತುಮಕೂರಿನಲ್ಲಿ ಮಾತನಾಡಿರುವ ಅವರು, ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿರೋದು ಸ್ಪಷ್ಟವಾಗುತ್ತಿದೆ. ಅಲ್ಲದೆ ಶಾಂತಿ ಕದಡಲು ಪ್ರಯತ್ನ ನಡೆಸಿದ್ದಾರೆ. ಶೀಘ್ರದಲ್ಲೇ ಸಾವರ್ಕರ್ ಭಾವಚಿತ್ರವನ್ನು ಹರಿದು ಹಾಕಿರುವಂತಹ ಕಿಡಿಗೇಡಿಗಳನ್ನು ಪತ್ತೆಹಚ್ಚಲಾಗುವುದು. ಈ ಕುರಿತು ಪ್ರಕರಣ ದಾಖಲಾಗಿದ್ದು, ಜನರು ಶಾಂತಿಯುತವಾಗಿರಬೇಕು ಯಾವುದೇ ಕಾರಣಕ್ಕೂ ಪ್ರಚೋದನೆಗೆ ಒಳಗಾಗಬಾರದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್

Edited By : Manjunath H D
PublicNext

PublicNext

17/08/2022 09:39 am

Cinque Terre

171.29 K

Cinque Terre

9

ಸಂಬಂಧಿತ ಸುದ್ದಿ