ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸ್​ ವಾಹನ ಡಿಕ್ಕಿ ಹೊಡೆತಕ್ಕೆ ಹಾರಿ ಬಿದ್ದ ಬೈಕ್​ ಸವಾರ: ವಿಡಿಯೋ ವೈರಲ್

ಹೈದರಾಬಾದ್​: ರಸ್ತೆ ತಿರುವಿನಲ್ಲಿ ವೇಗವಾಗಿ ಬಂದ ಪೊಲೀಸ್​ ವಾಹನ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಹಾರಿ ಹೋಗಿ ಬಿದ್ದ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚಂದೂರ್​ ಮಂಡಲದ ಬೊಡಂಗಿಪಾರ್ಥಿ ಗ್ರಾಮದಲ್ಲಿ ನಡೆದಿದೆ.

ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆಸಿಕ್ಕಿದೆ. ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ತಿರುವಿನಲ್ಲಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೈಕ್​ ಸವಾರನಿಗೆ ಗಂಭೀರ ಗಾಯವಾಗಿದ್ದು, ಅದೇ ಪೊಲೀಸ್​ ವಾಹನದಲ್ಲಿ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯಕ್ಕೆ ಪ್ರಾಣಕ್ಕೇನು ಅಪಾಯವಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಪೊಲೀಸ್​ ವರಿಷ್ಠಾಧಿಕಾರಿ ರಾಮ ರಾಜೇಶ್ವರಿ ಮಾತನಾಡಿದ್ದು, ಘಟನೆಯ ಕುರಿತು ಪರಿಶೀಲನೆ ನಡೆಸಿದ್ದೇವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Edited By : Abhishek Kamoji
PublicNext

PublicNext

19/08/2022 08:45 pm

Cinque Terre

80.65 K

Cinque Terre

4