ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಹಗಲ ರಾತ್ರಿ ಎನ್ನದೇ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದ್ದರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ.
ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದ ರೈತರ ಜಮೀನುಗಳಲ್ಲಿ ಮರಳು ದಂಧೆಕೋರರು ಅಕ್ರಮವಾಗಿ ಜಮೀನುಗಳನ್ನು ಬಗೆದು ಟ್ರ್ಯಾಕ್ಟರ್ ಹಾಗೂ ಲಾರಿ ಟಿಪ್ಪರ ಮೂಲಕ ಮರಳನ್ನು ಸಾಗಿಸುತ್ತಿದ್ದಾರೆ ಇಷ್ಟೇಲ್ಲಾ ಇದ್ದರು ಅಧಿಕಾರಿಗಳು ಮಾತ್ರ ಜಾಣ ಕುರುಡುತನ ತೋರುತ್ತಿದ್ದಾರೆ. ರೈತರು ಮೊದಲೇ ಮಳೆಯ ಹಾನಿಯಿಂದ ಕಂಗಾಲಾಗಿರುವ ರೈತರು ಮತ್ತೆ ಅಕ್ರಮವಾಗಿ ಮರಳನ್ನು ಲೂಟಿ ಮಾಡುತ್ತಿದ್ದರಿಂದ ಇನ್ನಷ್ಟು ಕಂಗಾಲಾಗಿದ್ದಾರೆ.
ರೈತರ ಜಮೀನುಗಳಲ್ಲಿ ಅಕ್ರಮವಾಗಿ ಮರಳು ಲೂಟಿ ಮಾಡಿ ಪೂರ್ತಿ ಹೊಲವನ್ನು ಹೊಂಡದಂತೆ ನಿರ್ಮಾಣ ಮಾಡಿದ್ದಾರೆ. ಹೀಗೆ ಅಕ್ರಮವಾಗಿ ಮರಳನ್ನು ಲೂಟಿ ಮಾಡಿ ನಂತರ ಮರಳನ್ನು ತೊಳೆದು ಮಾರಾಟ ಮಾಡುತ್ತಾರೆ. ಮರಳನ್ನು ತೊಳೆಯುವ ಸಲುವಾಗಿ ಮೊಟರ್ ಇಂಜನ್ ಇಟ್ಟಿದ್ದಾರೆ ಹಗಲು ರಾತ್ರಿ ಎನ್ನದೇ ಎಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಒಟ್ಟಿನಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಯಾವಾಗ ಎಂಬುವ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡುತ್ತಿದೆ.
ವರದಿ ಸುರೇಶ ಲಮಾಣಿ ಪಬ್ಲಿಕ್ ನೆಕ್ಸ್ಟ ಗದಗ
PublicNext
23/08/2022 03:06 pm