ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಸ್‌ಐ ಪರೀಕ್ಷೆ ಟಾಪರ್ ರಚನಾ ಬಂಧನ

ಬೆಂಗಳೂರು: ಪಿಎಸ್‌ಐ ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಟಾಪರ್ ಆಗಿದ್ದ ರಚನಾಳನ್ನು ಅಪರಾಧ ತನಿಖಾ ದಳ (ಸಿಐಡಿ) ಬಂಧಿಸಿದೆ.

545 ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ರಚನಾ ಹೆಸರು ಕೇಳಿ ಬಂದಿತ್ತು. ಸಿಐಡಿ ತನಿಖೆಯಲ್ಲಿ ರಚನಾ 30 ಲಕ್ಷ ನೀಡಿದ್ದರೆಂಬ ಮಾಹಿತಿ ಬಹಿರಂಗವಾಗಿತ್ತು. ಈ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿತ್ತು.

ರಚನಾ ಸರ್ಕಾರದ ಮರುಪರಿಕ್ಷಾ ಆದೇಶದ ವಿರುದ್ಧವೂ ಪ್ರತಿಭಟನೆಯಲ್ಲಿಯೂ ಭಾಗಿಯಾಗಿದ್ದಳು. ರಚನಾ ಎಫ್ಐಆರ್ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದಳು. ಇದೀಗ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

Edited By : Nagaraj Tulugeri
PublicNext

PublicNext

28/08/2022 10:09 am

Cinque Terre

41.53 K

Cinque Terre

4