ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಕಸಾಯಿಖಾನೆಗೆ ಸಾಗಿಸುತ್ತಿದ್ದ ಎತ್ತುಗಳ ರಕ್ಷಣೆ: ಆರೋಪಿಗಳ ಬಂಧನ

ಪಾವಗಡ: ನೆರೆಯ ಆಂಧ್ರಪ್ರದೇಶದ ಕಣೆಕಲ್‌ನಿಂದ ಹಿಂದೂಪುರ ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬಜರಂಗದಳ, ಶ್ರೀರಾಮಸೇನೆ ಕಾರ್ಯ ಕರ್ತರು ಬುಧವಾರ ರಾತ್ರಿ ತಡೆದು ಪೊಲೀಸರ ವಶಕ್ಕೆ ನೀಡಿದ್ದಾರೆ.

ವಾಹನದಲ್ಲಿ 5 ಎತ್ತುಗಳನ್ನು ಅಪಾಯಕಾರಿ ಸ್ಥಿತಿಯಲ್ಲಿ ಸಾಗಿಸಲಾಗುತ್ತಿತ್ತು. ಪ‍ಟ್ಟಣದ ತುಮಕೂರು ರಸ್ತೆಯಲ್ಲಿ ವಾಹನ ತಡೆದು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಿಸಲಾಗಿದೆ. ಆದಿಗೆಪಲ್ಲಿ ಭೀಮಪ್ಪ (28), ಕಣೇಕಲ್‌ನ ಅಪ್ಗಾನ್ ಫಯಾಜ್(23) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪಾವಗಡ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

01/09/2022 06:32 pm

Cinque Terre

50.2 K

Cinque Terre

0