ಚಿತ್ರದುರ್ಗ: ಪೋಕ್ಸೋ ಕೇಸ್ನಲ್ಲಿ ಮುರುಘಾಶ್ರೀಗಳ ಬಂಧನ ಪ್ರಕರಣ ಸಂಬಂಧ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳ ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಜಿಲ್ಲಾ ಕಾರಾಗೃಹದಿಂದ ಜಿಲ್ಲಾಸ್ಪತ್ರೆಗೆ ಮುರುಘಾ ಶ್ರೀಗಳನ್ನು ಶಿಫ್ಟ್ ಮಾಡಲಾಗಿದ್ದು, ಹಿರಿಯ ವೈದ್ಯೆ ರೂಪಾ, ಹೆರಿಗೆ ತಜ್ಞ ಡಾ.ಶಿವಕುಮಾರ್ ಸೇರಿ ಮೂವರು ವೈದ್ಯರ ನೇತೃತ್ವದಲ್ಲಿ ಶ್ರೀಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇನ್ನೂ ಶ್ರೀಗಳ ಅಡ್ವೋಕೆಟ್ ಉಮೇಶ್ ಚಿತ್ರದುರ್ಗ ಡಿಸ್ಟ್ರಿಕ್ಟ್ ಸರ್ಜನ್ ಡಾ. ಬಸವರಾಜ್ರಿಂದ ಮಾಹಿತಿ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆ ಶಿಫ್ಟ್ ಮಾಡಿ ಎಂದು ಡಿಸ್ಟ್ರಿಕ್ಟ್ ಸರ್ಜನ್ ಡಾ. ಬಸವರಾಜ್ ಹೇಳಿದ್ದಾರೆ ಎಂದು ಅಡ್ವೋಕೆಟ್ ಉಮೇಶ್ ಮಾಹಿತಿ ನೀಡಿದ್ದಾರೆ.
PublicNext
02/09/2022 10:30 am