ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್‌: 2ನೇ ಆರೋಪಿ ವಾರ್ಡನ್​ ರಶ್ಮಿ ಅರೆಸ್ಟ್

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮೇಲಿರುವ ಪೋಕ್ಸೋ ಪ್ರಕರಣ ಸಂಬಂಧ 2ನೇ ಆರೋಪಿ ವಾರ್ಡನ್ ರಶ್ಮಿ ಅವರನ್ನು ಬಂಧಿಸಲಾಗಿದೆ ಎಂದು ಚಿತ್ರದುರ್ಗ ಎಸ್​ಪಿ ಕೆ.ಪರಶುರಾಮ್‌ ತಿಳಿಸಿದ್ದಾರೆ.

ಆರೋಪಿ ರಶ್ಮಿಯನ್ನು ನಿನ್ನೆ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಇಂದು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ.

ಮುರುಘಾ ಶರಣರು ಸೇರಿದಂತೆ ವಸತಿ ನಿಲಯದ ವಾರ್ಡನ್ ರಶ್ಮಿ ಸೇರಿ ಮತ್ತೆ ಮೂವರ ವಿರುದ್ಧ ಪೋಕ್ಸೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದೀಗ ಎ-1 ಆರೋಪಿಯಾಗಿರುವ ಶಿವಮೂರ್ತಿ ಶಿವಾಚಾರ್ಯ ಶರಣರ ಬಂಧನದ ಬೆನ್ನಲ್ಲೇ ಎ-2 ಆರೋಪಿ ರಶ್ಮಿ ಅವರನ್ನು ಸಹ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೈದ್ಯಕೀಯ ತಪಾಸಣೆ ಮಾಡಿಸಿ ಬಳಿಕ ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ.

Edited By : Vijay Kumar
PublicNext

PublicNext

02/09/2022 03:27 pm

Cinque Terre

41.33 K

Cinque Terre

7

ಸಂಬಂಧಿತ ಸುದ್ದಿ