ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಆ ಅವಧಿ ಮುಕ್ತಾಯವಾಗಿದ್ದು ಮತ್ತೊಮ್ಮೆ ಪೊಲೀಸರು ಶ್ರೀಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಮುರುಘಾಶ್ರೀಗಳ ನಿರೀಕ್ಷಣಾ ಜಾಮೀನು ವಜಾ ಆಗಿರುವುದರಿಂದ ಸೋಮವಾರ ಮಠದ ವಕೀಲರು ರೆಗ್ಯೂಲರ್ ಬೇಲ್‌ಗಾಗಿ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ.
ಇನ್ನು ಮುರುಘಾ ಶ್ರೀಗಳನ್ನು ಭಾನುವಾರ ಅಧಿಕಾರಿಗಳು ಮುರುಘಾ ಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಬೆಳಗ್ಗೆ 11.45 ರಿಂದ ಮಧ್ಯಾಹ್ನ 2.30 ರವರೆಗೆ ಮಠದಲ್ಲಿ ಮಹಜರು ನಡೆಯಿತು. ಮಠದಿಂದ ಮಹಜರು ಮುಗಿಸಿಕೊಂಡ ಹೋದ ಶ್ರಿಗಳು ಡಿವೈಎಸ್ ಪಿ ಕಚೇರಿಯಲ್ಲಿ ಕೆಲಕಾಲ ವಿಶ್ರಾಂತಿ ಪಡೆದಿದ್ದಾರೆ. ನಂತರ ಮತ್ತೆ ವಿಚಾರಣೆಗೆ ಹಾಜರಾಗಿದ್ದಾರೆ.
PublicNext
05/09/2022 07:49 am