ಬೆಳಗಾವಿ: ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಶ್ರೀಗುರು ಮಡಿವಾಳೇಶ್ವರ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದ ಆವರಣ ಕೊಠಡಿಯಲ್ಲೇ ರವಿವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗ್ಗೆ ಭಕ್ತರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಟಿ ತನಿಖೆ ಆರಂಭಿಸಿದ್ದಾರೆ. ಕೊಠಡಿಯಲ್ಲಿ ಸ್ವಾಮೀಜಿ ಡೆತ್ ನೋಟ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಡೆತ್ ನೋಟ್‌ನಲ್ಲಿ ಏನಿದೆ ಅನ್ನೋದು ಇನ್ನೂ ನಿಖರವಾಗಿ ತಿಳಿದು ಬಂದಿಲ್ಲ. ಆದರೆ ಇತ್ತೀಚೆಗೆ ಬೆಳಗಾವಿ ಮೂಲದ ಮಹಿಳೆಯರಿಬ್ಬರು ಸ್ವಾಮೀಜಿಗಳ ಕುರಿತು ಆಡಿಯೋ ಒಂದು ವೈರಲ್ ಆಗಿತ್ತು. ಈ ಆಡಿಯೋದಲ್ಲಿ ಈ ಸ್ವಾಮೀಜಿಯ ಹೆಸರು ಕೂಡಾ ಉಲ್ಲೇಖವಾಗಿತ್ತು ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಹಾಗಾದ್ರೆ ಮನನೊಂದು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡರಾ ಅನ್ನೋ ಚರ್ಚೆಗಳಿಗೂ ಇದೀಗ ಈ ಆತ್ಮಹತ್ಯೆ ನಾಂದಿ ಹಾಡಿದೆ.
PublicNext
05/09/2022 11:54 am