ಕೋಲ್ಕತ್ತಾ: ವಾರ್ಷಿಕ ಲಕ್ಷ್ಮೀ ಪೂಜೆ ಹಮ್ಮಿಕೊಂಡಾಗ ಹಿಂದೂಗಳ ಮನೆ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ದಾಳಿ ನಡೆದಿದೆ.
ಕೋಲ್ಕತ್ತ ನಗರದ ಮೊಮಿನ್‌ಪುರ್ ಪ್ರದೇಶದಲ್ಲಿ ನಿನ್ನೆ ರವಿವಾರ ತಡರಾತ್ರಿ ಈ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಕೆಲ ಯುವಕರು ಹಿಂದೂಗಳ ಮನೆಗೆ ನುಗ್ಗಿ ದಾಂಧಲೆ ನಡೆಸಿ ಕಂಡವರ ಮೇಲೆ ಹಲ್ಲೆ ಮಾಡಿದ್ದಾರೆ. ಬೈಕ್ ಹಾಗೂ ಇತರ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ.
ಇನ್ನು ಸ್ಥಳಕ್ಕೆ ಬಂದ ಪೊಲೀಸರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಸದ್ಯ ಮೊಮಿನ್‌ಪುರ ಪ್ರದೇಶ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಪೊಲೀಸರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
PublicNext
10/10/2022 05:54 pm