ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಗಸ್ತು ತಿರುಗುತ್ತಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರ ಮೇಲೆ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಪುಲ್ವಾಮಾ ಜಿಲ್ಲೆಯ ಪ್ಯಾಂಪೊರ್ ಬೈಪಾಸ್ ಬಳಿ ಸೋಮವಾರ ಮಧ್ಯಾಹ್ನ 12:50 ರ ವೇಳೆಗೆ ಉಗ್ರರು ದಾಳಿ ನಡೆಸಿದ್ದಾರೆ. ಇದೀಗ ಸ್ಥಳದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಭದ್ರತಾ ಪಡೆಗಳಿಂದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆಯಲ್ಲಿ ಇಬ್ಬರು ಯೋಧರು ತೀವ್ರವಾಗಿ ಗಾಯಗೊಂಡಿದ್ದರಿಂದ ಹುತಾತ್ಮರಾಗಿದ್ದಾರೆ. ಉಳಿದಂತೆ ಗಾಯಗೊಂಡ ಮೂವರು ಯೋಧರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
PublicNext
05/10/2020 03:44 pm