ಚಿಕ್ಕಮಗಳೂರು: ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದೆ. ಪರಿಣಾಮ ಬೈಕ್‌ನಿಂದ ಬಿದ್ದ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಸತ್ತಿಗನಹಳ್ಳಿ ಗ್ರಾಮದ ಪ್ರಭಾಕರ್ ಎಂಬುವರಿಗೆ ಕೈ, ಕಾಲಿಗೆ ಗಾಯಗಳಾಗಿವೆ. ಕಾಡಾನೆ ದಾಳಿಯಿಂದ ಪ್ರಭಾಕರ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕಾಡಾನೆ ಹತ್ತಿ ಬರುತ್ತಿದ್ದಂತೆ ಪ್ರಭಾಕರ್ ಬೈಕ್‌ನಿಂದ ಜಿಗಿದ ಪರಿಣಾಮ ಅವರ ಕೈ-ಕಾಲಿಗೆ ತೀವ್ರ ಗಾಯಗಳಾಗಿವೆ. ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೂಡಿಗೆರೆ ತಾಲೂಕಿನ ಹಲವೆಡೆ ಕಾಡಾನೆಗಳ ಭೀತಿ ಹೆಚ್ಚಾಗಿದೆ. ಹೀಗಾಗಿ ಜನರು ಆತಂಕದಲ್ಲೇ ಓಡಾಡುತ್ತಿದ್ದಾರೆ. ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
PublicNext
01/07/2022 11:13 am