ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ರಿಸ್ತ ಪ್ರತಿಮೆ: ಸ್ಥಳೀಯರ ಆಕ್ರೋಶ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲದ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಐದು ಅಡಿ ಎತ್ತರದ ಏಸುಕ್ರಿಸ್ತನ ಪ್ರತಿಮೆ ಪ್ರತಿಷ್ಟಾಪಿಸಲಾಗಿದೆ. ಇದಕ್ಕೆ ಸ್ಥಳೀಯರು ಹಾಗೂ ಹಾಗೂ ಪರಿಸರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ್ಲಿಪಾಳ್ಯ ಗ್ರಾಮದ ಸಮೀಪದಲ್ಲಿರುವ ಹೂಗ್ಯ ಎಂಬ ಪ್ರದೇಶದ ಅರಣ್ಯ ಭೂಮಿಯಲ್ಲಿ ಎರಡನೇ ಲಾಕ್‌ಡೌನ್ ಜಾರಿ ಇದ್ದ ಸಮಯದಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂಬ ಮಾಹಿತಿ ಇದೆ.

ಸ್ಥಳೀಯರು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಹಾಗೂ ಒತ್ತುವರಿಯಾಗಿರುವ ಜಾಗ ತೆರವುಗೊಳಿಸದಂತೆ ಮಾಡಲು ಇಲ್ಲಿ ಪ್ರತಿಮೆ ಸ್ಥಾಪಿಸಿದ್ದಾರೆ ಎಂದು ವನ್ಯಜೀವಿ ಕಾರ್ಯಕರ್ತರು ಆರೋಪಿಸಿದ್ದಾರೆ.

Edited By : Nagaraj Tulugeri
PublicNext

PublicNext

15/11/2021 07:51 pm

Cinque Terre

78.4 K

Cinque Terre

6