ಚಿತ್ರದುರ್ಗ: ಜಿಲ್ಲೆಯಲ್ಲಿ ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಮನೆ ಗೋಡೆ ಕುಸಿದು ಓರ್ವ ಮಹಿಳೆ ಬಲಿಯಾಗಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ತ್ರಿವೇಣಿ (24) ವರ್ಷ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಿಷಯ ತಿಳಿದ ತಕ್ಷಣ ಪಿಎಸ್ಐ ಪರುಶುರಾಮ ಎನ್ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
19/11/2021 08:21 am