ಗದಗ: ಜಿಲ್ಲೆಯ ವಿವಿಧೆಡೆ ಇಂದು (ಶನಿವಾರ) ಮಳೆರಾಯ ಅಬ್ಬರಿಸಿದ್ದು, ಗುಡುಗು ಸಿಡಿಲು ಸಹಿತ ಮಳೆಗೆ ಮೂವರು ಸಾವನ್ನಪ್ಪಿದ್ದಾರೆ.
ಶಿರಹಟ್ಟಿ ತಾಲ್ಲೂಕಿನ ಹರಿಪುರ ಹೊರವಲಯದಲ್ಲಿ ಮಾವಿನ ತೋಟ ಕಾಯುತ್ತಿದ್ದ ಮಾಬುಸಾಬ್ ದೊಡ್ಡಮನಿ (55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರಗೇಶ ಹೊಸಮನಿ (40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಇನ್ನು ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿ ಹಳ್ಳಿಕೇರಿ ಗ್ರಾಮದ ಹನುಮಪ್ಪ ಸಿದ್ದಪ ಮನ್ನಾಪುರ (22) ವೆಂಕಟಾಪುರದಲ್ಲಿ ಕುರಿ ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಲಕ್ಷ್ಮೇಶ್ವರ ತಾಲ್ಲೂಕಿನ ಸುತ್ತಮುತ್ತ ಆಲಿಕಲ್ಲು ಮಳೆ ಸುರಿದಿದೆ.
PublicNext
16/04/2022 09:09 pm