ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಕದಿಯಲು ಹೋಗಿ ಪ್ರಾಣತೆತ್ತ ಕಳ್ಳ.!

ಕಳ್ಳತನಕ್ಕೆ ಮುಮದಾಗಿದ್ದ ಕಳ್ಳನೋರ್ವ ಮನೆಯ ಮೇಲಿಂದ ಆಯಾತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆ ನಗರದ ಕೆಟಿಜೆ ನಗರದಲ್ಲಿ ನಡೆದಿದೆ.

ಕೆಟಿಜೆ ನಗರದ ಮನೆಯೊಂದರಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕಿ ಮೂವರು ಕಳ್ಳರು ಬಂದಿದ್ದರು. ಈ ವೇಳೆ ಕಳ್ಳರ ಸಪ್ಪಳದಿಂದ ಮನೆಯವರು ಎಚ್ಚರಗೊಂಡಿದ್ದಾರೆ. ಆಗ ಯಾರು ಯಾರು ಎಂದು ಮನೆಯವರು ಕೂಗಿದ್ದಾರೆ. ತಕ್ಷಣವೇ ಅಲ್ಲಿಂದ ಪರಾರಿಯಾಗುವ ಯತ್ನದಲ್ಲಿ ಮನೆ ಮಹಡಿಯಿಂದ ಕಳ್ಳ ಬಿದ್ದಿದ್ದಾನೆ. ಪರಿಣಾಮ ತಲೆ ಹಾಗೂ ಮುಖಕ್ಕೆ ತೀವ್ರ ಪೆಟ್ಟು ಬಿದ್ದಿದ್ದು, ಸ್ಥಳಕ್ಕೆ ಬಂದ ಪೊಲೀಸರು ಜಿಲ್ಲಾಸ್ಪತ್ರೆಗೆ ಕರೆದೊಯ್ಯವ ಮಾರ್ಗ ಮಧ್ಯದಲ್ಲಿಯೇ ಕಳ್ಳ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By :
PublicNext

PublicNext

25/05/2022 12:49 pm

Cinque Terre

87.3 K

Cinque Terre

3

ಸಂಬಂಧಿತ ಸುದ್ದಿ