ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ : ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ : 4 ಜನ ಸಾವು, 19 ಜನರಿಗೆ ಗಂಭೀರ ಗಾಯ.!

ಕುಟುಂಬವೊಂದರಲ್ಲಿ ಸಂಭ್ರಮ ಮನೆ ಮಾಡಿತ್ತು. ಸಂಬಂಧಿಕರು ಬೀಗರು ಎಲ್ಲರು ಸೇರಿ ಸೀಮಂತ ಕಾರ್ಯಕ್ರಮದಲ್ಲಿ ತಲ್ಲೀನರಾಗಿದ್ದರು. ಈ ವೇಳೆ ಏಕಾಏಕಿ ಅಡುಗೆ ಅನಿಲ ಸ್ಫೋಟಗೊಂಡು ಮೂವರು ಮೃತಪಟ್ಟು 20ಜನರಿಗೆ ಗಂಭೀರವಾಗಿ ಗಾಯಗೊಂಡಿರೋ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ರಾಮನಗೌಡ ಅವರ ಮನೆಯಲ್ಲಿ ಸೀಮಂತ ಕಾರ್ಯಕ್ರಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಶಾಮಿಯಾನಿಗೆ ಬೆಂಕಿ ಹತ್ತಿ, ನಿಂಗಮ್ಮ( 80) ಆಧ್ಯಾ (3) ಮಹಾಂತೇಶ್ (2) ಚಿಕಿತ್ಸೆ ಫಲಕಾರಿಯಾಗದೆ ಕಲಬುರಗಿ ಬಸವೇಶ್ವರ ಆಸ್ಪತ್ರೆಯಲ್ಲಿ

ಮೃತಪಟ್ಟಿದ್ದಾರೆ. ಇಂದು ಚಿಕಿತ್ಸೆ ಫಲಿಸದೆ ಗಂಗಮ್ಮ (50) ಮೃತಪಟ್ಟಿದ್ದಾರೆ.

ಇನ್ನುಳಿದ ಗಾಯಾಳುಗಳು ಕಲಬುರ್ಗಿಯ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಟ್ಟಾರೆ ಗ್ಯಾಸ್ ಸಿಲಿಂಡರ್ ಸ್ಫೋಟದ ದುರಂತಕ್ಕೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸ್ಮಶಾನ ಮೌನ ಆವರಿಸಿದೆ.

Edited By :
PublicNext

PublicNext

26/02/2022 12:34 pm

Cinque Terre

149.86 K

Cinque Terre

6

ಸಂಬಂಧಿತ ಸುದ್ದಿ