ಸುಬ್ರಹ್ಮಣ್ಯ: ಸ್ಯಾಂಡಲ್‌ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಕುಟುಂಬ ಸಮೇತ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಕುಟುಂಬದ ಜತೆ ಅವರು ಹೆಚ್ಚು ಸಮಯ ಕಳೆಯುತ್ತಾರೆ. ಈಗ ಅವರು ಪತ್ನಿ ಪ್ರಿಯಾ ಮತ್ತು ಮಗಳು ಸಾನ್ವಿ ಸಮೇತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಮೂವರು ಸುಬ್ರಹ್ಮಣ್ಯ ದೇವರ ದರ್ಶನವನ್ನು ಪಡೆದಿದ್ದಾರೆ. ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠೆ ಸೇವೆ ಸಲ್ಲಿಸಿದ್ದಾರೆ. ನಂತರ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಇದೆ. ಸುದೀಪ್ ಸದ್ಯ, 'ವಿಕ್ರಾಂತ್ ರೋಣ' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಈ ಸಿನಿಮಾ ಸಾಕಷ್ಟು ಹೈಪ್ ಪಡೆದುಕೊಂಡಿದೆ.
PublicNext
11/12/2021 05:01 pm