ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ನೂಗಲಬಂಡೆ ಬಡಾವಣೆಯಲ್ಲಿ ನಿನ್ನೆ (ಶುಕ್ರವಾರ) ಸಂಜೆ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆಯಾದ ಪರಿಣಾಮ ಎರಡೂ ಗುಂಪಿನ ಇಬ್ಬರಿಗೆ ಗಾಯಗಳಾಗಿವೆ.
ಸದ್ಯ ಮೂವರನ್ನು ಮುಳಬಾಗಲು ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಣೇಶ ಮೂರ್ತಿ ಮೆರವಣಿಗೆ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಯುವಕರನ್ನು ಪ್ರಶ್ನೆ ಮಾಡುತ್ತಿದ್ದ ವೇಳೆ ಅಲ್ಲೆ ಪಕ್ಕದಲ್ಲಿದ್ದ ಮತ್ತೋರ್ವ ಜಾಗ ಬಿಡಲಿಲ್ಲ ಎನ್ನುವ ವಿಚಾರದಲ್ಲಿ ಗಲಾಟೆ ಮಾಡಿದ್ದಾನೆ. ಈ ವೇಳೆ ಎರಡು ಗುಂಪಿನ ಯುವಕರ ಮಧ್ಯೆ ಗಲಾಟೆಯಾಗಿದ್ದು. ಹಿಂದೂ ಯುವಕರಿಬ್ಬರಿಗೆ ಗಾಯವಾಗಿದೆ. ಗಾಯಳುಗಳನ್ನು ಮನೋಜ್ (19) ಹಾಗೂ ಸುರೇಂದ್ರ (20) ಎಂದು ಗುರುತಿಸಲಾಗಿದೆ.
ಹಲ್ಲೆ ಮಾಡಿದ ನೂಗಲಬಂಡೆಯ ಅಕ್ಬರ್, ಅಫ್ಜಲ್, ಯಾಸಿನ ಪಾಷ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನೂಗಲಬಂಡೆ ಗಲಾಟೆ ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು ಸೂಕ್ತ ಬಂದೋಬಸ್ತ್ ಮಾಡಲಾಗಿದೆ.
PublicNext
03/09/2022 07:39 am